ಕನ್ನಡಿಗರ ಒಮ್ಮತದ ಹಬ್ಬವಾಗಲಿ ಕರ್ನಾಟಕ ಸಂಭ್ರಮ-೫೦ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣವಾಗಿ ೫೦ ವರ್ಷಗಳು ಗತಿಸಿರುವ ಹಿನ್ನೆಲೆಯಲ್ಲಿ ನವೆಂಬರ್ ೨ ರಿಂದ ರಾಜ್ಯಾದ್ಯಂತ ಹೆಸರಾಗಲಿ ಕನ್ನಡ, ಉಸಿರಾಗಲಿ ಕರ್ನಾಟಕ ಘೋಷವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-೫೦ ವರ್ಷಾಚರಣೆ ನಡೆಸಲಾಗುತ್ತಿದೆ. ಗದಗನಲ್ಲಿ ನ. ೩ರಂದು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಸಂಭ್ರಮಾಚರಣೆ ಆಯೋಜಿಸಲಾಗುತ್ತಿದೆ.