ಕರಾವಳಿಯಲ್ಲೇ ಉದ್ಯೋಗಸೃಷ್ಟಿಗೆ ಕ್ರಮ: ಡಿಕೆ ಶಿವಕುಮಾರ್ಕರಾವಳಿ ಪ್ರದೇಶಕ್ಕಾಗಿ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು. ಬಳಿಕ ಅಲ್ಲಿ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪನೆ ಬಗ್ಗೆ ಯೋಚಿಸುತ್ತೇವೆ. ಹೊಟೆಲ್, ಬ್ಯಾಂಕ್, ಉದ್ಯಮ ವಲಯಕ್ಕೆ ಕರಾವಳಿ ಕೊಡುಗೆ ಅಪಾರ. ಉಡುಪಿ ಪಂಚಾಯತಿ ಒಂದರಲ್ಲೇ ಮೂರು ಮೆಡಿಕಲ್ ಕಾಲೇಜಿದೆ. ಅಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಜತೆಗೆ ಅಲ್ಲೇ ಉದ್ಯೋಗ ಸೃಷ್ಟಿಗೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.