8ರಿಂದ ಗುರುರಾಯರ 354ನೇ ಆರಾಧನೆಕಲಿಯುಗದ ಕಾಮದೇನು, ಕಲ್ಪವೃಕ್ಷ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವನ್ನು ಇದೇ 8 ರಿಂದ 14 ವರೆಗೆ ಮಂತ್ರಾಲಯ ಮಠದಲ್ಲಿ ಅದ್ದೂರಿಯಾಗಿ ಆಚರಿಸುತ್ತಿದ್ದು, ಆರಾಧನೆ ಹಿನ್ನೆಲೆಯಲ್ಲಿ ನಡೆಯಲಿರುವ ಸಪ್ತರಾತ್ರೋತ್ಸವದಲ್ಲಿ ಹತ್ತು ಹಲವು ಧಾರ್ಮಿಕ-ಸಾಂಸ್ಕೃತಿ ಕಾರ್ಯಕ್ರಮಗಳು ಆಯೋಜಿಸಲಾಗಿದ್ದು, ಮಹೋತ್ಸವ ಆಚರಣೆಗೆ ಅಗತ್ಯವಾದ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ತಿಳಿಸಿದರು.