ಸಾರಿಗೆ ಮುಷ್ಕರ: ಕೆ.ಆರ್.ಪೇಟೆ ಗ್ರಾಮೀಣ ಪ್ರದೇಶದ ಸಂಚಾರ ಅಸ್ತವ್ಯಸ್ತಕೆ.ಆರ್.ಪೇಟೆ ಪಟ್ಟಣದ ಮಾರ್ಗವಾಗಿ ನಾಡಿನ ಇತರೆ ಜಿಲ್ಲೆಗಳನ್ನು ಸಂಪರ್ಕಿಸುವ ಹೊರಗಿನ ಡಿಪೋಗಳ ಬಸ್ ಸಂಚಾರವೂ ಸ್ಥಗಿತಗೊಂಡಿದ್ದರಿಂದ ಪಟ್ಟಣದಿಂದ ಮೈಸೂರು, ಮಂಡ್ಯ, ಬೆಂಗಳೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೋಗ್ಗ ಸೇರಿದಂತೆ ದಕ್ಷಿಣ ಮತ್ತು ಉತ್ತರ ಕರ್ನಾಟಕವನ್ನು ಸಂಪರ್ಕಿಸುವ ಸಾರಿಗೆ ವ್ಯವಸ್ಥೆಯ ಕೊಂಡಿ ಕಳಚಿ ಬಿದ್ದಿತ್ತು.