ನಿರ್ಲಕ್ಷ್ಯ ವಹಿಸಿದ ಕಂಪನಿ ಅನುಮತಿ ರದ್ದುಪಡಿಸಿ: ಸಿಇಓಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಅಪಾಯಕಾರಿ ಕೆಮಿಕಲ್- ತ್ಯಾಜ್ಯ ಕಂಪನಿಗಳ ವಿರೋಧಿಸಿ, ಆ ಭಾಗದ ನಾಲ್ಕು ಗ್ರಾಪಂಗಳು ಸಾಮಾನ್ಯ ಸಭೆಯಲ್ಲಿ ಹೊರಡಿಸಿರುವ ಒಮ್ಮತದ ಠರಾವು ಕುರಿತು, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪತ್ರ ಬರೆದಿರುವ ಯಾದಗಿರಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ ಒರಡಿಯಾ, ಸರ್ಕಾರದ ನಿರ್ದೇಶನ ಅನುಸಾರ ಕಂಪನಿಗಳು ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಾಂತ್ರಿಕ ಸಮಿತಿ ನೀಡುವ ನಿರ್ದೇಶನ ಅನುಸಾರ ಕಂಪನಿಗಳನ್ನು ಪ್ರಾರಂಭಿಸಲಾಗಿದೆಯೇ ಎಂಬುವುದನ್ನು ಪರಿಶೀಲಿಸಿ, ನಿರ್ಲಕ್ಷ್ಯ ವಹಿಸಿದ್ದಲ್ಲಿ, ಸಂಬಂಧಪಟ್ಟ ಕಂಪನಿಗಳ ಪರವಾನಗಿ ರದ್ದುಪಡಿಸುವಂತೆ ತಿಳಿಸಿದ್ದಾರೆ.