ಕಳೆದ 2024ನೇ ಸಾಲಿನ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಅನುಮತಿಸಿರುವ ಹೈಕೋರ್ಟ್, ತನ್ನ ಪೂರ್ವಾನುಮತಿಯಿಲ್ಲದೆ ಆಯ್ಕೆ ಪ್ರಕ್ರಿಯೆಯ ಅಂತಿಮ ಫಲಿತಾಂಶ ಪ್ರಕಟಿಸಬಾರದು ಎಂಬ ಷರತ್ತು ವಿಧಿಸಿದೆ.
ನ್ಯಾಯಾಧೀಶ ರೈ ಅವರು, ಹರ್ಷೇಂದ್ರ ಕುಮಾರ್ ಕುಟುಂಬ ನಿರ್ವಹಣೆ ಮಾಡುತ್ತಿರುವ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿದ್ದರು. ಹೀಗಾಗಿ, ಹಾಲಿ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಮೆಮೊದಲ್ಲಿ ಕೋರಿದ್ದರು.
ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಅನಾಮಿಕನ ದೂರು ನೀಡಿದ್ದ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ವಿಶೇಷ ತನಿಖಾ ತಂಡದ ಕಾರ್ಯಾಚರಣೆ ಆರನೇ ದಿನ ಸೋಮವಾರವೂ ಮುಂದುವರಿದಿದೆ. ಇಲ್ಲಿನ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಸ್ಥಿಪಂಜರವೊಂದು ಪತ್ತೆಯಾಗಿದೆ. ಆದರೆ ಇದು ದೂರುದಾರ ತೋರಿಸಿದ ಸ್ಥಳದಲ್ಲಿ ಇದ್ದದ್ದಲ್ಲ.
ಕೆಆರ್‌ಎಸ್ ಟಿಪ್ಪು ಸುಲ್ತಾನ್ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ. ಕೆಆರ್‌ಎಸ್ ಅಣೆಕಟ್ಟು ನಿರ್ಮಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ನನ್ನ ಹೇಳಿಕೆಯನ್ನು ತಿರುಚಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.
‘ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ. ಕೇವಲ 14 ತಿಂಗಳ ಹಿಂಬಾಕಿ ನೀಡಲು ಸಿದ್ಧ’ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಘೋಷಿಸಿದರು.
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್. ನಾಗಮೋಹನ್‌ದಾಸ್ ಆಯೋಗದ ವರದಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಕೆಯಾಗಿದ್ದು, ಆ.7ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಜಾರಿ ಬಗ್ಗೆ ಸರ್ಕಾರ ತೀರ್ಮಾನ ಮಾಡಲಿದೆ.
ಎಲೆಕ್ಟ್ರಾನಿಕ್ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸುಮಾರು ಅರ್ಧ ಕಿ.ಮೀ.ನಷ್ಟು ರೋಡ್ ಶೋ ಕೂಡ ನಡೆಸಲಿದ್ದಾರೆ.
ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಅದರ ಹೊರತಾಗಿಯೂ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಮಂಗಳವಾರ ಬೆಳಗ್ಗೆಯಿಂದಲೇ ಮುಷ್ಕರ ನಡೆಸುವುದಾಗಿ ಘೋಷಿಸಿದೆ.