ಬ್ಯಾರೇಜ್ ಭರ್ತಿಯಾದರೂ ತಪ್ಪಲಿಲ್ಲ ಗದಗ-ಬೆಟಗೇರಿ ನೀರಿನ ಗೋಳುಗದಗ-ಬೆಟಗೇರಿ ಅವಳಿ ನಗರಕ್ಕೆ ಪೂರೈಕೆಯಾಗುವ ಕುಡಿವ ನೀರಿನ ಮೂಲವಾದ ತುಂಗಭದ್ರಾ ನದಿಗೆ ಅಡ್ಡವಾಗಿ ಮುಂಡರಗಿ ತಾಲೂಕಿನಲ್ಲಿ ನಿರ್ಮಿಸಿರುವ ಸಿಂಗಟಾಲೂರು ಬ್ಯಾರೇಜ್ ಸಂಪೂರ್ಣ ಭರ್ತಿಯಾದರೂ ಗದಗ ಬೆಟಗೇರಿ ಅವಳಿ ನಗರದಲ್ಲಿ ಇಂದಿಗೂ 20ರಿಂದ 25 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.