ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಆರಂಭಿಸಿಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಹಾಗೂ ಜಿಲ್ಲೆಯ ಜನರ ಪರವಾಗಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ಜಿಲ್ಲಾಧಿಕಾರಿಯವರಿಗೆ ಆಗಸ್ಟ್ ೧೪ರಂದು ಸಲ್ಲಿಸಿದ ನಂತರ ಆ. ೧೫ರ ಸ್ವಾತಂತ್ರ್ಯ ದಿನದಂದು ಹಾಸನದ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮುಂದೆ ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಡಿಸಿಯವರು ಆಗಮಿಸಿ ಹಕ್ಕೊತ್ತಾಯ ಈಡೇರಿಸಲು ಕ್ರಮಕೈಗೊಳ್ಳಬೇಕೆಂದು ಒತ್ತಾಯ ಮಾಡಲಾಗುವುದು ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು.