ಎಂಎಲ್‌ಸಿಗಳ ಅನುದಾನದ ಕಾಮಗಾರಿಗಳ ಪರಿಶೀಲನೆವಿಧಾನ ಪರಿಷತ್ ಸದಸ್ಯರಾದ ಸೂರಜ್ ರೇವಣ್ಣ ಅವರು ತಾಲೂಕಿನ ವಿವಿಧ ಗ್ರಾಮಗಳ ಸಮುದಾಯ ಭವನ ಮತ್ತು ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿಗಳಿಗೆ ಕುರಿತು ತಮ್ಮ ಅನುದಾನವನ್ನು ಈ ಹಿಂದೆ ನೀಡಲಾಗಿದ್ದು ,ಅವುಗಳ ಪ್ರಗತಿ ಪರಿಶೀಲನೆಯನ್ನು ಮಂಗಳವಾರ ಗ್ರಾಮಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.ಈಗಾಗಲೇ ಶೇಕಡವಾರು ಕಾಮಗಾರಿಗಳು ಮುಗಿದಿರುವ ಸಂದರ್ಭದಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲು ಅಗತ್ಯವಾಗಿ ಬೇಕಾಗಿರುವ ಅನುದಾನವನ್ನು ಈ ವರ್ಷದ ಅನುದಾನದಲ್ಲಿ ಬಿಡುಗಡೆ ಮಾಡಿ ಕಾಮಗಾರಿಗಳು ಪೂರ್ಣಗೊಳ್ಳಲು ಸಹಕರಿಸುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.