ಕಿತ್ತೂರಿನ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರಬಂಗಾರಪ್ಪನವರ ಕಾಲದಲ್ಲಿ ಚಿಕ್ಕದಾಗಿ ಆರಂಭವಾದ ಕಿತ್ತೂರು ಉತ್ಸವ ಈಗ ನಾಡಿನ ಗಮನ ಸೆಳೆಯುತ್ತಿದೆ. ಚನ್ನಮ್ಮನ ಹೋರಾಟ ಆದರ್ಶಗಳನ್ನು ಅಳವಡಿಸಿಕೊಂಡು, ಚನ್ನಮ್ಮನ ಹೋರಾಟ ದಿಲ್ಲಿಯವರೆಗೆ ಕೇಳಬೇಕು. ಆ ರೀತಿ ಕಾರ್ಯಕ್ರಮ ಆಯೋಜನೆಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.