ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು 1ನೇ ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಆ. 6ರಂದು ವಿಚಾರಣೆ ಮುಂದೂಡಲಾಗಿದ್ದು, ಅಂದು ಫಯಾಜ್ ಖುದ್ದು ಹಾಜರಾಗುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.