ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನನಾಲ್ವಡಿ ಕೃಷ್ಣರಾಜ ಒಡೆಯರ್ ಕಟ್ಟಿದ ಕನ್ನಡ ಸಾಹಿತ್ಯ ಪರಿಷತ್ ಇಂದು ಆಲದ ಮರದ ಹಾಗೆ ಬೆಳೆದಿದ್ದು ಕನ್ನಡ ಭಾಷೆಯನ್ನು ಸದೃಢಗೊಳಿಸಲು ಅಂದೇ ರಾಜರು ಬುನಾದಿ ಹಾಕಿಕೊಟ್ಟಿದ್ದಾರೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು. ೧೯೧೫ರಲ್ಲಿ ಸಾಹಿತ್ಯ ಪರಿಷತ್ ಉಗಮವಾಯಿತು. ಅಂದಿನಿಂದ ಇಂದಿನವರೆಗೂ ಕನ್ನಡಿಗರು ಪರಿಷತ್ ಅನ್ನು ಬೆಳೆಸುತ್ತಿದ್ದಾರೆ, ಅದನ್ನು ಉಳಿಸಿ ಬೆಳೆಸಿ ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು.