ಜಮೀನು ವ್ಯಾಜ್ಯ: ವ್ಯಕ್ತಿ ಮೇಲೆ ಸಿನಿಮೀಯ ರೀತಿ ಹಲ್ಲೆ !ಜಮೀನು ವ್ಯಾಜ್ಯವೊಂದಕ್ಕೆ ಸಂಬಂಧಿಸಿದಂತೆ, ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಲೆಂದು ಮುಂಬೈನಿಂದ ಇಲ್ಲಿಗೆ ಬಂದಿದ್ದ ದುಷ್ಕರ್ಮಿಗಳ ಗುಂಪೊಂದು, ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿ ವೇಳೆ, ಕಾರಿನ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದಾಗ, ಸ್ಥಳೀಯರ ನೆರವಿನಿಂದ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಗುರುವಾರ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ.