ಇಂದು ವರ ಮಹಾಲಕ್ಷ್ಮೀ ವ್ರತ: ಹಬ್ಬಕ್ಕೆ ಬೆಲೆ ಏರಿಕೆಯ ಬರೆ ವರಮಹಾಲಕ್ಷ್ಮೀ ಹಬ್ಬಕ್ಕೆ ಪ್ರಮುಖವಾಗಿ ಬೇಕಾಗಿರುವ ಲಕ್ಷ್ಮೀ ಮುಖವಾಡ, ಬಳೆ ಖರೀದಿ ಭರಾಟೆ ಜೋರಾಗಿತ್ತು. ತಮ್ಮ ಶಕ್ತ್ಯಾನುಸಾರ ಚಿನ್ನ, ಬೆಳ್ಳಿ, ಮೆಟಲ್ ಲಕ್ಷ್ಮೀ ಮುಖವಾಡ ಖರೀದಿಸಿದರು. ಮುತ್ತೈದೆಯರಿಗೆ ನೀಡಲು ಬಳೆಗಳ ಖರೀದಿಯೂ ಜೋರಾಗಿತ್ತು. ಇದರಿಂದಾಗಿ ಬಳೆ ಅಂಗಡಿಗಳು ಮಹಿಳೆಯರಿಂದಲೇ ತುಂಬಿದ್ದವು.