ಕಾಂಗ್ರೆಸ್ ಸರ್ಕಾರದಿಂದ ಎಸ್ಸಿ, ಎಸ್ಟಿ ಜನಾಂಗಕ್ಕೆ ಅನ್ಯಾಯಎಸ್ಸಿಪಿ, ಟಿಎಸ್‌ಪಿ ಉಪಯೋಜನೆಯಡಿ ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟ ₹೪೫,೦೦೦ ಕೋಟಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ಈ ಮೂಲಕ ತಳ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಬಿಜೆಪಿ ಎಸ್ಟಿ ಮತ್ತು ಎಸ್ಸಿ ಮೋರ್ಚಾ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪವಾಲರಿಗೆ ಮನವಿ ಸಲ್ಲಿಸಿತು.