ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಪ್ರತಿಯೊಬ್ಬರೂ ಪಣತೊಡಬೇಕು: ಮಂಜುನಾಥ್ಶೃಂಗೇರಿ, ನಮ್ಮ ಮನೆ, ಸುತ್ತಮುತ್ತಲ ವಾತಾವರಣ ಹೇಗೆ ಸ್ವಚ್ಚವಾಗಿಟ್ಟುಕೊಳ್ಳುತ್ತೇವೆಯೋ ಹಾಗೆಯೇ ನಮ್ಮ ಸುತ್ತಮುತ್ತಲ ಪ್ರದೇಶದ ಪರಿಸರ ನೈರ್ಮಲ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಪ್ಲಾಸ್ಟಿಕ್, ತ್ಯಾಜ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಶೃಂಗೇರಿ ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಿ.ಮಂಜುನಾಥ್ ಹೇಳಿದರು.