ಮುಂದಿನ ದಿನಗಳಲ್ಲಿ ಆನೇಕಲ್ ಭಾಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು . ಈಗಾಗಲೇ ಆನೇಕಲ್‌ಗೆ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ನವೆಂಬರ್ ಕ್ರಾಂತಿಯ ಚರ್ಚೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಕುರಿತ ಡಾ। ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ. ನಾಯಕ ಸಮುದಾಯಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯವಾಗುವುದಿಲ್ಲ ಎಂಬ ಸಂದೇಶ ರವಾನೆಯ ಉದ್ದೇಶವನ್ನು ಇದು ಹೊಂದಿದೆ ಎನ್ನಲಾಗುತ್ತಿದೆ.
ಸಿದ್ದರಾಮಯ್ಯನವರ ಸ್ಥಾನ ತುಂಬುವ ಶಕ್ತಿ ಜಾರಕಿಹೊಳಿ ಅವರಿಗೆ ಇದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಅವರೇ ಮುನ್ನಡೆಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡ್ಯ ಪ್ರಕರಣ ಮಾಸುವ ಮುನ್ನವೇ, ಮೈಸೂರು ಜಿಲ್ಲೆಯ ಫಾರ್ಮ್‌ಹೌಸ್‌ನಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಲಿಂಗ ಪತ್ತೆಯ ಜಾಲವೊಂದನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ದೀಪಾವಳಿ ಹಬ್ಬದಂದು ಪತ್ತೆ ಹಚ್ಚಿದ್ದಾರೆ.