ಕೆಎಸ್ಸಾರ್ಟಿಸಿ ನೌಕರ ಮುಷ್ಕರ, ಪರ್ಯಾಯ ಖಾಸಗಿ ಬಸ್ಗಳುತಮ್ಮ 38 ತಿಂಗಳ ಬಾಕಿ ವೇತನ ಬಿಡುಗಡೆ, ವೇತನ ಪರಿಷ್ಕರಣೆ, ಕಾರ್ಮಿಕರ ಮೇಲಿನ ಕಿರುಕುಳ ನಿಲ್ಲಬೇಕು ಎಂಬುದು ಸೇರಿದಂತೆ ಕೆಎಸ್ಸಾರ್ಟಿಸಿ ಸ್ಟ್ಯಾಫ್ ಅಂಡ್ ವರ್ಕರ್ಸ್ ಫೆಡರೇಷನ್ ನೇತೃತ್ವದಲ್ಲಿ ಕರೆ ನೀಡಿದ್ದ ಕೆಎಸ್ಸಾರ್ಟಿಸಿ ನೌಕರರ ಮುಷ್ಕರವೇನೋ ಯಶಸ್ವಿಯಾಯಿತು. ಆದರೂ, ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್‌ಗಳು, ಮಿನಿ ಬಸ್‌ಗಳ ಸೇವೆ ಒದಗಿಸಿ, ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಯಿತು.