ಯಾವುದೇ ರಸ್ತೆಯನ್ನು ಅರಣ್ಯ ಇಲಾಖೆ ಮುಚ್ಚಿಲ್ಲಬಂಗಾರಪೇಟೆ ತಾಲೂಕಿನ ತಳೂರು ಗ್ರಾಮದಲ್ಲಿ ಕೆಲವರು ಅರಣ್ಯ ಇಲಾಖೆಯ ಜಾಗವನ್ನು ಆಕ್ರಮಿಸಿಕೊಂಡು ಬೇಲಿ ಹಾಕಿಕೊಂಡಿದ್ದರು, ಇದನ್ನು ತಡೆಗಟ್ಟುವ ಸಲುವಾಗಿ ಇಲಾಖೆ ಒತ್ತುವರಿಯನ್ನು ತೆರವುಗೊಳಿಸಲು ಬೇಲಿ ಹಾಕಿದೆ. ಇದನ್ನು ಅರಿಯದ ಮಾಜಿ ಸಂಸದರು ಮಲ್ಲೇಶನಪಾಳ್ಯಕ್ಕೆ ಹೋಗುವ ರಸ್ತೆಯನ್ನು ಅರಣ್ಯ ಇಲಾಖೆ ಮುಚ್ಚಿದೆ ಎಂದು ಆರೋಪಿಸಿದ್ದಾರೆ.