ಕಳಪೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ 2022-23ರಲ್ಲಿ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ನಾಲತವಾಡದಲ್ಲಿ ನಗರೋತ್ಥಾನ ಯೋಜನೆಯಡಿ ಹಾಗೂ ಎಸ್‌ಎಫ್‌ಸಿ ವಿಶೇಷ ಅನುದಾದಡಿಯಲ್ಲಿ ಗುತ್ತಿಗೆದಾರರು ಅರ್ಧಂಬರ್ಧ ಕಾಮಗಾರಿ ಮಾಡಿ ಮುಂಗಡ ಹಣ ಪಾವತಿ ಮಾಡಿಕೊಂಡು ಕಾಮಗಾರಿ ನಿಗದಿತ ಅವಧಿ ಮುಗಿದರೂ ಇಲ್ಲಿತನಕವೂ ಪೂರ್ಣಗೊಳಿಸಿಲ್ಲ. ಅಲ್ಲದೇ, ಕಳಪೆ ಕಾಮಗಾರಿ ಮಾಡಿದ್ದು, ಈ ಬಗ್ಗೆ ಸಾರ್ವಜನಿಕರಿಂದ ದೂರು ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಂತಹ ಕಾಮಗಾರಿಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಜತೆಗೆ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು.