ಇತಿಹಾಸ ಹಾಗೂ ಪರಂಪರೆ ಮೇಲೆ ಬೆಳಕು ಚೆಲ್ಲುವ ಜೀವಂತ ವಸ್ತುಗಳೇ ಪತ್ರಗಳು: ಮಂಜುನಾಥ್ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಚರಿತ್ರಾರ್ಹ ಘಟನೆಗಳು, ದೇಶದ ಅಮೂಲ್ಯ ದಾಖಲೆಗಳು ಹಾಗೂ ಸರ್ಕಾರದ ಆಸ್ತಿಪಾಸ್ತಿ ಕುರಿತ ಮಾಹಿತಿಗಳು ಪತ್ರಾಗಾರ ಇಲಾಖೆಯಲ್ಲಿ ಸುರಕ್ಷಿತವಾಗಿರುತ್ತವೆ. ನಾವು ಹುಟ್ಟಿನಿಂದ ಸಾಯುವವರೆಗೂ ನಡೆಯುವ ವಿವಿಧ ಹಂತಗಳ ಚಟುವಟಿಕೆಗಳನ್ನು ಸಂರಕ್ಷಿಸಿ ಜೋಪಾನ ಮಾಡಿ ನಮ್ಮ ಮುಂದಿನ ತಲೆಮಾರಿಗೆ ಜೋಪಾನ ಮಾಡುವುದು ಅತೀ ಅಗತ್ಯವಾಗಿದೆ.