ಈ ವರ್ಷದ ಹಾಸನಾಂಬೆ ದರ್ಶನೋತ್ಸವಕ್ಕೆ ಗುರುವಾರ ತೆರೆಗಣ್ಯರ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಮಧ್ಯಾಹ್ನ 1.05ಕ್ಕೆ ೧೫ ದಿನದಿಂದ ನಡೆದ ಜಾತ್ರಾ ಮಹೋತ್ಸವಕ್ಕೆ ಗುರುವಾರದಂದು ಗರ್ಭಗುಡಿ ಬಾಗಿಲು ಮುಚ್ಚಿ ಬೀಗ ಹಾಕುವ ಮೂಲಕ ೨೦೨೫ರ ಹಾಸನಾಂಬ ಉತ್ಸವಕ್ಕೆ ತೆರೆ ಎಳೆಯಲಾಯಿತು. ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ಹಾಕುವ ವೇಳೆ ಕೆಲ ಸಮಯದಲ್ಲಿ ನೆರೆದಿದ್ದ ಕರ್ತವ್ಯನಿರತ ಸಿಬ್ಬಂದಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಬೆಳಗ್ಗೆ ಪೂಜೆ, ನೈವೇದ್ಯಕ್ಕಾಗಿ ಸಾರ್ವಜನಿಕ ದರ್ಶನ ಬಂದ್ ಆಗಿದ್ದರಿಂದ ಸಾವಿರಾರು ಭಕ್ತರು ದರ್ಶನ ಸಾಧ್ಯವಾಗದೇ ನಿರಾಸೆಗೊಂಡು ವಾಪಸ್ ಹೋಗಬೇಕಾಯಿತು.