ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡಕೃಷ್ಣಾ ತೀರದ ರೈತರ ಅನುಕೂಲಕ್ಕಾಗಿ ಶ್ರಮಿಸಿದ ಮಾಜಿ ಕೇಂದ್ರ ಸಚಿವ, ಶಾಸಕ ದಿ.ಸಿದ್ದು ನ್ಯಾಮಗೌಡರು ಈ ಭಾಗದ ರೈತರು ನೀರಾವರಿ ಸೌಲಭ್ಯ ಪಡೆದು ಆರ್ಥಿಕವಾಗಿ ಸಬಲರಾಗಲಿ ಎಂಬ ಉದ್ದೇಶದಿಂದ ಚಿಕ್ಕಪಡಸಲಗಿ ಬಳಿ ಬ್ಯಾರೇಜ್‌ನ್ನು ರೈತರ ಸಹಕಾರದಿಂದ ನಿರ್ಮಿಸಿ ನೀರಾವರಿ ಸೌಲಭ್ಯ ಕಲ್ಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.