• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೀಪಾವಳಿ ಹಿನ್ನೆಲೆ ಗುಣಿಕೇರಿಯಲ್ಲಿ ಲಕ್ಕೆ ಪೂಜೆ
ದೀಪಾವಳಿ ಹಬ್ಬದ ಪ್ರಯುಕ್ತ ನಾವು ಪ್ರತಿ ವರ್ಷವೂ ಲಕ್ಕೆ ಪೂಜೆ ಹಾಗೂ ಭೂಮಿಪೂಜೆ ನೆರವೇರಿಸುತ್ತೇವೆ. ಅದರೊಂದಿಗೆ ದನದ ಕೊಟ್ಟಿಗೆ ಹಾಗೂ ತಿಪ್ಪೆ ಗುಂಡಿಗಳಿಗೆ ಪೂಜೆ ಸಲ್ಲಿಸುವುದು ನಮ್ಮ ಸಂಪ್ರದಾಯವಾಗಿದೆ ಎಂದು ಹೇಳಿದರು. ಈ ರೀತಿಯ ಆಚರಣೆಗಳು ನಮ್ಮ ಪುರಾತನ ಸಂಸ್ಕೃತಿಯ ಪ್ರತೀಕಗಳು. ಇವು ಕೆಲವು ಗ್ರಾಮೀಣ ಭಾಗಗಳಲ್ಲಿ ಮಾತ್ರ ಇಂದಿಗೂ ಉಳಿದಿವೆ. ನಗರ ಪ್ರದೇಶಗಳಲ್ಲಿ ಇಂತಹ ಸಂಪ್ರದಾಯಗಳು ನಿಧಾನವಾಗಿ ಕಣ್ಮರೆಯಾಗುತ್ತಿವೆ. ಆದರೂ ನಾವು ಗುಣಿಕೇರಿ ಬೀದಿಯವರು ಈ ಸಂಪ್ರದಾಯವನ್ನು ಜೀವಂತವಾಗಿ ಉಳಿಸಿಕೊಂಡು ಪ್ರತಿ ವರ್ಷವೂ ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.
ಬೆಲೆ ಹೆಚ್ಚಿದರೂ ಪಟಾಕಿ ಖರೀದಿಗೆ ಜನರ ಆಸಕ್ತಿ
ಪಟಾಕಿಗಳಿಂದ ಪರಿಸರ ಮಾಲಿನ್ಯ ಆಗುತ್ತದೆ ಎಂಬ ಸತ್ಯ ಗೊತ್ತಿದ್ದರೂ ಪಟಾಕಿ ಹೊಡೆಯುವವರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಜತೆಗೆ ಪ್ರತಿ ವರ್ಷ ಪಟಾಕಿ ಬೆಲೆ ಹಚ್ಚಳವಾಗುತ್ತಿದ್ದರೂ ವ್ಯಾಮೋಹ ಮಾತ್ರ ದೂರವಾಗುತ್ತಿಲ್ಲ. ಪಟಾಕಿ ಮಳಿಗೆಗಳೆದುರು ಖರೀದಿಗೆ ಜನರ ಹೆಚ್ಚಿಗೆ ಆಗಮಿಸುತ್ತಿರುವುದು ವ್ಯಾಪಾರಸ್ಥರು ಖುಷಿಯಾಗಿದ್ದಾರೆ. ಪಟಾಕಿ ಮಾರಾಟಕ್ಕೆ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ನಿರಾಕ್ಷೇಪಣ ಪತ್ರ ಕಡ್ಡಾಯವಾಗಿದ್ದು, ಆಗತ್ಯ ಕ್ರಮಗಳನ್ನು ಕೈಗೊಂಡ ಬಳಿಕ ಪಟಾಕಿ ಸ್ಟಾಲ್ ತೆರೆಯಲು ಅನುಮತಿ ನೀಡಲಾಗಿದೆ. ಶನಿವಾರದಿಂದ ತಾಲೂಕು ಕೇಂದ್ರದಲ್ಲಿ ಪಟಾಕಿ ಮಾರಾಟ ಆರಂಭವಾಗಿದ್ದು, ಜನರು ಮಕ್ಕಳೊಂದಿಗೆ ಪಟಾಕಿ ಖರೀದಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ತಾಲೂಕು ಕಚೇರಿ ಎದುರು ವಿಷದ ಬಾಟಲಿ ಹಿಡಿದು ನೊಂದ ರೈತ ಪ್ರತಿಭಟನೆ
ಈಗಾಗಲೇ ಸುಮಾರು ಐದಾರು ಬಾರಿ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ. ಸರ್ವೆ ಇಲಾಖೆಯಲ್ಲಿ ಬಾರಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು ಇಲ್ಲಿಯ ರಾಮಕೃಷ್ಣ ಅವರಿಗೆ ದಂಡಾಧಿಕಾರಿಗಳು ಜಾಗ ಪರಿಶೀಲಿಸಿ ಸಂಪೂರ್ಣ ಮಾಹಿತಿ ನೀಡುವಂತೆ ಒತ್ತುವರಿದಾರರಿಗೆ ನೋಟಿಸ್‌ ನೀಡುವಂತೆ ಎಚ್ಚರಿಕೆ ನೀಡಿದ್ದರೂ ಇದರ ಬಗ್ಗೆ ರಾಮಕೃಷ್ಣ ಅವರು ತಲೆಕೆಡಿಸಿಕೊಳ್ಳದೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಪ್ರತಿ ಬಾರಿ ಇಲ್ಲಿಗೆ ಬಂದಾಗ ಭರವಸೆ ನೀಡಿ ನಮ್ಮನ್ನು ಸಾಗುಹಾಕುತ್ತಿದ್ದಾರೆ . ಒತ್ತುವರಿದಾರರು ಬಲಾಡ್ಯರು ಆಗಿರುವುದರಿಂದ ಈ ಅಧಿಕಾರಿಗಳು ಶಾಮೀಲಾಗಿ ನಮಗೆ ತೊಂದರೆಕೊಡುತ್ತಿದ್ದು ಇದರಿಂದ ಮನನೊಂದು ನಮಗೆ ನ್ಯಾಯ ಸಿಗದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದು ಒಂದೇ ದಾರಿ ಎಂದು ತಮ್ಮ ಅಳಲು ತೋಡಿಕೊಂಡರು.
ಸಂಸದ ರಮೇಶ್‌ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ಸಂಘ ಆಗ್ರಹ
ವಾಲ್ಮಿಕಿ ಸಮಾಜವನ್ನು ನಿಂದನೆ ಮಾಡಿದ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ಪಟ್ಟಣದ ಆರಕ್ಷಕ ಠಾಣೆಗೆ ಮನವಿ ಸಲ್ಲಿಸಲಾಯಿತು. ತಾಲೂಕು ಉಪಾಧ್ಯಕ್ಷ ಕುಮಾರ ನಾಯಕ ಮಾತನಾಡಿ, ರಮೇಶ್ ಕತ್ತಿ ಅವರ ಹೇಳಿಕೆ ನಮ್ಮ ಸಮಾಜದ ಗೌರವಕ್ಕೆ ಹಾನಿ ಉಂಟುಮಾಡಿದೆ. ಸರ್ಕಾರವು ತಕ್ಷಣವೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು. ಸರ್ಕಾರ ನಿರ್ಲಕ್ಷ್ಯ ತೋರಿದರೆ ರಾಜ್ಯವ್ಯಾಪಿ ವಾಲ್ಮೀಕಿ ಸಮಾಜದವರು ಬೃಹತ್ ಮಟ್ಟದ ಹೋರಾಟ ನಡೆಸುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಹೊಳೆನರಸೀಪುರದಲ್ಲಿ ದೀಪಾವಳಿಗೆ ಭರದ ಸಿದ್ಧತೆ
ಹೊಳೆನರಸೀಪುರ ಪಟ್ಟಣದಲ್ಲಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮನೆ ಮಾಡಿದ್ದು, ಪಟ್ಟಣದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ವ್ಯಾಪಾರ ವಹಿವಾಟು ಜೋರಾಗಿ ನಡೆದಿದೆ. ತಾಲೂಕಿನಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಹೂ, ಹಣ್ಣು, ಆಭರಣ, ಸಲಂಕಾರಿಕ ವಸ್ತುಗಳ ವ್ಯಾಪಾರ ಜೋರಾಗಿ ನಡೆದಿದೆ. ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಕ್ಕಾಗಿ ಜನರು ಉತ್ಸಾಹದಿಂದ ಅಗತ್ಯ ವಸ್ತುಗಳನ್ನು ಖರೀದಿಸಿದರು.
ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆ
70ನೇ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯನ್ನು ಶಾಸಕರು ಹಾಗೂ ತಹಸೀಲ್ದಾರ್ ಅವರ ಅನುಪಸ್ಥಿತಿಯಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿಗಳಾದ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಶಾಲಾ ಮಕ್ಕಳೊಡನೆ ಅದ್ಧೂರಿಯಾಗಿ ನಡೆಸಬೇಕಾಗಿರುವುದರಿಂದ ತಾಲೂಕಿನ ಎಲ್ಲಾ ಇಲಾಖೆಗಳು ಭಾಗವಹಿಸಿ ತಮಗೆ ವಹಿಸುವ ಜವಾಬ್ದಾರಿಯುತ ಕೆಲಸಗಳನ್ನು ನಿರ್ವಹಿಸಬೇಕಾಗಿ ಹಾಗೂ ಎಲ್ಲಾ ಕಚೇರಿಯ ಎಲ್ಲಾ ಸಿಬ್ಬಂದಿ ಕೂಡ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.
ಭ್ರಷ್ಟಾಚಾರದಲ್ಲಿ ದಾಖಲೆ ಬರೆಯುತ್ತಿರುವ ಸರ್ಕಾರ: ಬಿ.ವೈ.ರಾಘವೇಂದ್ರ
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ದುರಾಡಳಿತದ ಕುರಿತಂತೆ ಜನಸಾಮಾನ್ಯರು, ಮಾಧ್ಯಮಗಳು ಹೇಳುತ್ತಿರುವುದನ್ನು ಕೇಳಿಸಿ ಕೊಂಡಿದ್ದಲ್ಲಿ, ಕಾಂಗ್ರೆಸ್ ಸರ್ಕಾರ ತನ್ನ ಭ್ರಷ್ಟಾಚಾರದ ಕುರಿತು ದಾಖಲೆಗಳನ್ನು ಕೇಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಲೇವಡಿ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ದೀಪಾವಳಿ ಸಂಭ್ರಮ
ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಂಗಳವಾರ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಕಂಡು ಬಂದಿತು. ಶ್ರದ್ಧಾ- ಭಕ್ತಿಯಿಂದ ಲಕ್ಷ್ಮೀ ಪೂಜೆ ಮಾಡುವ ಮೂಲಕ ಇಷ್ಟಾರ್ಥ ಈಡೇರಿಸುವಂತೆ ಪ್ರಾರ್ಥಿಸಿದರು.
ಪತ್ರಕರ್ತರ ಸಮಸ್ಯೆ ಬಗೆಹರಿಸಲು ಮತ್ತೆ ಅವಕಾಶ ನೀಡಿ: ಇ.ಎಂ.ಮಂಜುನಾಥ್
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ನ.9ರಂದು ನಡೆಯಲಿದೆ. ಮತ್ತೊಮ್ಮೆ ತಂಡದ ಜೊತೆಗೆ ನಮ್ಮನ್ನು ಆಯ್ಕೆ ಮಾಡುವ ಮೂಲಕ ಸಂಘದ ಅಭಿವೃದ್ಧಿ ಹಾಗೂ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್ ಮನವಿ ಮಾಡಿದ್ದಾರೆ.
ಅವ್ಯಾಚ ಶಬ್ದಗಳಿಂದ ನಿಂದಿಸಿರುವುದು ಅಪರಾಧ
ವಾಲ್ಮೀಕಿ ಸಮಾಜದ ಮುಖಂಡರನ್ನು ಸಾರ್ವಜನಿಕವಾಗಿ ನಿಂದಿಸಿರುವ ಮಾಜಿ ಸಂಸದ ರಮೇಶ್‌ ಕತ್ತಿ ಅವರನ್ನು ಜಾತಿ ನಿಂದನೆ ಪ್ರಕರಣದಡಿ ಬಂಧಿಸಬೇಕೆಂದು ನಗರದಲ್ಲಿ ವಾಲ್ಮೀಕಿ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 14545
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved