ಭಕ್ತಜನರ ಪರಾಕಿನೊಂದಿಗೆ ಕುಕ್ಕೆ ಚಂಪಾಷಷ್ಠಿ ಬ್ರಹ್ಮರಥೋತ್ಸವರಾಜಬೀದಿಯಲ್ಲಿ ನಾಗಸ್ವರ, ಪಂಚವಾದ್ಯ, ಬ್ಯಾಂಡ್,ಜಾಗಟೆ,ಶಂಖ ವಾದ್ಯ ಮತ್ತು ಚೆಂಡೆ ವಾದನಗಳ ಹಿಮ್ಮೇಳದಲ್ಲಿ ಸಾಲಾಂಕೃತ ಆನೆ, ಬಿರುದಾವಳಿ, ಭಕ್ತಜನರ ಜಯಘೋಷದ ನಡುವೆ ಬೆಳಗ್ಗೆ ೭.೩೩ರ ಧನುರ್ ಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯು ಬ್ರಹ್ಮರಥಾರೂಢರಾದರು. ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾ ಮಂಗಳಾರತಿ ನೆರವೇರಿತು.