ಮಕ್ಕಳ ಮೇಲಿನ ದೌರ್ಜನ್ಯ ತಡೆ ನಮ್ಮೆಲ್ಲರ ಕರ್ತವ್ಯಧಾರವಾಡದಲ್ಲಿ ಸೋಮವಾರ ವಸತಿ ನಿಲಯದ ನಿಲಯ ಪಾಲಕರು ಹಾಗೂ ಬಿಆರ್ಪಿ, ಸಿಆರ್ಪಿಗಳಿಗೆ ಬಾಲನ್ಯಾಯ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಆದ್ದರಿಂದ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯ. ಜತೆಗೆ ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ತಡೆಯುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.