ಗೋವಿನಹಳ್ಳಿಯಲ್ಲಿ ಬಸವಣ್ಣನ ಪ್ರತಿಮೆ ಅನಾವರಣಗೋವಿನಹಳ್ಳಿಯಲ್ಲಿ ಗೌತಮಬುದ್ಧ, ಜಗಜ್ಯೋತಿ ಬಸವಣ್ಣನವರ ಪ್ರತಿಮೆ ಅನಾವರಣ ಮಾಡಲಾಗುವುದು ಎಂದು ಮಾಜಿ ಗ್ರಾಪಂ ಸದಸ್ಯ ಗೋವಿನಹಳ್ಳಿ ರವಿ ತಿಳಿಸಿದರು.ಈ ಕಾರ್ಯಕ್ರಮಕ್ಕೆ ನಿಜಗುಣಾನಂದ ಸ್ವಾಮೀಜಿ, ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಕರ್ನಾಟಕ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಎಚ್ ಸಿ ಮಹದೇವಪ್ಪ, ಉಸ್ತುವಾರಿ ಸಚಿವ ರಾಜಣ್ಣ, ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್ ಕೆ ಸುರೇಶ್, ಮಾಜಿ ಶಾಸಕ ಕೆ ಎಸ್ ಲಿಂಗೇಶ್ ಸೇರಿದಂತೆ ಸರಿ ಸುಮಾರು ೫ ಸಾವಿರ ಜನ ಸೇರಲಿದ್ದಾರೆಂದರು.