ಮುಖ್ಯ ರಸ್ತೆ ಅಗಲೀಕರಣಕ್ಕೆ ಸಹಕರಿಸದಿದ್ದರೇ ಬ್ಯಾಡಗಿ ಬಂದ್ ಎಚ್ಚರಿಕೆಮುಖ್ಯರಸ್ತೆ ಅಗಲೀಕರಣ ವಿಚಾರದಲ್ಲಿ ಅಲ್ಲಿನ ಮಾಲೀಕರು ಕಳೆದ ಜೂ.10ರಂದು ಪ್ರತಿಭಟನೆ ವಾಪಸ್ ಪಡೆಯುವ ವೇಳೆಯಲ್ಲಿ ಅಗಲೀಕರಣಕ್ಕೆ ಸಹಕರಿಸುವುದಾಗಿ ಜಿಲ್ಲಾಡಳಿತ ಸೇರಿದಂತೆ ಸಾರ್ವಜನಿಕರೆದುರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು, ಇಲ್ಲದಿದ್ದಲ್ಲಿ ಮುಖ್ಯರಸ್ತೆ ಸ್ಥಗಿತಗೊಳಿಸಿ ಬ್ಯಾಡಗಿ ಬಂದ್ ಮಾಡಿ ಬೃಹತ್ ಹೋರಾಟ ಅನಿವಾರ್ಯವಾಗಲಿದೆ ಎಂದು ಅಗಲೀಕರಣ ಹೋರಾಟ ಸಮಿತಿ ಅಧ್ಯಕ್ಷ ಸುರೇಶ ಛಲವಾದಿ ಎಚ್ಚರಿಸಿದರು.