ಹೊನ್ನಾಟದಲ್ಲಿ ಮುಳುಗೆದ್ದ ಯಾದವಾಡ ಗ್ರಾಮಸ್ಥರು21 ವರ್ಷಗಳ ನಂತರ ಜಾತ್ರೆ ನಡೆಯುತ್ತಿರುವುದರಿಂದ ಗ್ರಾಮದಲ್ಲಿ ವಿಶೇಷ ಸಂಭ್ರಮ ಮನೆ ಮಾಡಿದೆ. ಜಾತ್ರೆ ನಿಮಿತ್ತ ಮೂರು ದಿನಗಳ ಕಾಲ ಹೊನ್ನಾಟ ನಡೆಯುತ್ತಿದ್ದು, ಇದಕ್ಕೆ ಶನಿವಾರ ಹಾಗೂ ಭಾನುವಾರ ಅದ್ಧೂರಿಯಾಗಿ ನಡೆಯಿತು. ಗ್ರಾಮದೇವಿಯರ ಮೂರ್ತಿಗಳೊಂದಿಗೆ ಮೆರವಣಿಗೆ ಹೊರಟಾಗ ಜನ ಭಂಡಾರ, ಹೂವುಗಳನ್ನು ತೂರಿ ಭಂಡಾರದ ಮಳೆ ಸುರಿಸಿದರು.