ಪೆಹಲ್ಗಾಮ್ ಮೃತರ ಸದ್ಗತಿಗಾಗಿ ಮಲ್ಪೆ ಸಮುದ್ರದಲ್ಲಿ ತಿಲತರ್ಪಣೆಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟವರ ಸದ್ಗತಿಗಾಗಿ, ಅಭಿನವ ಭಾರತ್ ಸಂಘಟನೆಯಿಂದ ಸೋಮವಾರ ಮಲ್ಪೆಯ ಹನುಮಾನ್ ವಿಠೋಭಾ ಭಜನಾ ಮಂದಿರದಲ್ಲಿ ‘ಗೀತಾ ತ್ರಿಷ್ಟುಪ್ ಹೋಮ’ ನಡೆಸಿ, ಮಲ್ಪೆ ಸಮುದ್ರದಲ್ಲಿ ತಿಲತರ್ಪಣ ಬಿಡಲಾಯಿತು.