ಪತ್ರಿಕೆ ಹಂಚುವ ಹುಡುಗನಿಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ 98 ಅಂಕ!ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿರುವ ಜನತಾ ವಿದ್ಯಾವರ್ಧಕ ಸಂಸ್ಥೆಯ ಬಿ.ಎಚ್. ಪಾಟೀಲ ಪ್ರೌಢಶಾಲೆಯ ವಿದ್ಯಾರ್ಥಿ, ದಿನ ಪತ್ರಿಕೆ ಹಂಚುವ ಹುಡುಗ, ಬಡ ರೈತನ ಮಗ ಪ್ರಕಾಶ ಬಸವರಾಜ ಪಾಪನಾಶಿ, ಶೇ 98.24 ರಷ್ಟು ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾನೆ.