ತಡಸ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಶಿಗ್ಗಾಂವಿ ತಾಲೂಕಿನ ದೊಡ್ಡ ಗ್ರಾಪಂ, ಸುತ್ತಮುತ್ತಲಿನ ತಾಲೂಕುಗಳ ಮಧ್ಯವರ್ತಿ ಕೇಂದ್ರ ಎನಿಸಿರುವ ತಡಸದ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ. ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು, ನರ್ಸ್‌ಗಳ ಕೊರತೆ ಇದ್ದು, ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ.