ಗ್ರಾ. ಪಂ.ವ್ಯಾಪ್ತಿಯಲ್ಲಿ ಬರುವ ಕೃಷಿ ತೆರಿಗೆಗೆ ಒಳಪಡದ ಎಲ್ಲಾ ಆಸ್ತಿಗಳನ್ನು ಗುರುತಿಸಿ ನಿಯಮಬದ್ಧವಾಗಿ ತೆರಿಗೆ ಮತ್ತು ಶುಲ್ಕಗಳ ವಸೂಲಿಗೆ ತಂದಿರುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ನಿಯಮ 2025ಅನ್ನು ಸರ್ಕಾರ ಶುಕ್ರವಾರ ಪ್ರಕಟಿಸಿದೆ.
ಕೌಶಲ್ಯ ತರಬೇತಿ ನೀಡಿದಾಕ್ಷಣ ಯುವನಿಧಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದಿಂದ ಎರಡು ವರ್ಷ ಯುವನಿಧಿ ಕೊಡಲಾಗುವುದು.
ಕನ್ಹೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ ಬೆನ್ನಲ್ಲೇ ಶುಕ್ರವಾರ ಬಾಗಲಕೋಟೆ ಜಿಲ್ಲೆಯಲ್ಲಿದ್ದ ಶ್ರೀಗಳಿಗೆ ತಕ್ಷಣವೇ ಜಿಲ್ಲೆ ತೊರೆಯುವಂತೆ ಜಿಲ್ಲಾಧಿಕಾರಿ ಸಂಗಪ್ಪ ಆದೇಶ
ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಪ್ರಯಾಣಿಕರು ನಿಲ್ಲಿಸುವಂತೆ ಕೇಳಿದರೂ ಉದ್ಧಟತನದಿಂದ ಚಾಲಕ ಬಸ್ ನಿಲ್ಲಿಸದೇ ಚಲಾಯಿಸಿದ್ದರಿಂದ ಬಸ್ ಸಮೇತ 36 ಪ್ರಯಾಣಿಕರ ದಾಖಲೆಗಳು, ಬ್ಯಾಗ್ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಗುರುಮಠಕಲ್‌ನ ರೈಸ್ ಮಿಲ್ ಗಳಲ್ಲಿ ಪತ್ತೆಯಾದ ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ವೇಳೆ ಸಿಕ್ಕ ಡೈರಿಯೊಂದರಲ್ಲಿನ ಬರೆದಿಟ್ಟಿರುವ ಅಂಶಗಳು ಲಂಚಾವತಾರದ ರಹಸ್ಯಗಳನ್ನು ಬಯಲಾಗಿಸಲಿವೆ.
ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕ್ಷೇತ್ರದ ಜನರಿಗೆ ಪಟಾಕಿ ಹಂಚಲು ಪಟಾಕಿ ದಾಸ್ತಾನು ಮಾಡಿದ್ದ ಕಚೇರಿಗೆ ಪೊಲೀಸರು ಬೀಗ ಹಾಕಿದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಹೈಡ್ರಾಮವೇ ನಡೆಯಿತು.
ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿಯಿಂದ ಉಂಟಾಗಬಹುದಾದ ಗಾಯ, ಹಾನಿಗಳಿಗೆ ಚಿಕಿತ್ಸೆ ನೀಡಲು ದಿನದ 24 ಗಂಟೆಯೂ ಸೇವೆ ನೀಡಲು ಬೆಂಗಳೂರು ನಗರದ ಮಿಂಟೋ ಕಣ್ಣಿನ ಆಸ್ಪತ್ರೆ ಸಜ್ಜಾಗಿದೆ. ಸೇವೆ ನೀಡಲು 25 ಬೆಡ್ ವ್ಯವಸ್ಥೆ ಮಾಡಲಾಗಿದೆ.
ನಮ್ಮ ಇಲಾಖೆಯಿಂದ ಮುಂದಿನ ತಿಂಗಳು ಇನ್ನೂ 49 ಸಾವಿರ ಮನೆಗಳನ್ನು ಫಲಾನುಭವಿ ಬಡವರಿಗೆ ಹಂಚಿಕೆ ಮಾಡುತ್ತಿದ್ದೇವೆ. ಹಂಚಿಕೆಯಾದ ಬಳಿಕ ಮನೆ ಕಟ್ಟಿರುವ ಗುತ್ತಿಗೆದಾರರಿಗೆ 900 ಕೋಟಿ ರು.ಗೂ ಹೆಚ್ಚು ಹಣ ಬಿಡುಗಡೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ತಿಳಿಸಿದ್ದಾರೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಶನಿವಾರ ಕಡೆ ದಿನವಾಗಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ 7.5 ಲಕ್ಷ ಮನೆಗಳಿಂದ 13 ಲಕ್ಷ ಜನರನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. 27 ಸಾವಿರ ಜನರು ಸಮೀಕ್ಷೆಯನ್ನು ತಿರಸ್ಕರಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.