ಹಳೆ ನಲ್ಲಿ ಸಂಪರ್ಕ ತೆಗೆದು ಹೊಸ ಸಂಪರ್ಕಕ್ಕೆ ನೀರು ಪೂರೈಸಿಕನ್ನಡಪ್ರಭ ವಾರ್ತೆ ವಿಜಯಪುರ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಪೂರ್ವದಲ್ಲಿ ಓವರ್ ಹೆಡ್ ಟ್ಯಾಂಕ್ ನ್ನು ಸ್ವಚ್ಛಗೊಳಿಸಿ, ಕ್ಲೋರಿನೇಷನ್ ಮಾಡಿ, ನೀರಿನ ಗುಣಮಟ್ಟ ಪರೀಕ್ಷಿಸಬೇಕು. ಗ್ರಾಮಗಳಲ್ಲಿನ ಹಳೆಯ ಸಂಪರ್ಕಗಳನ್ನು ಕಡ್ಡಾಯವಾಗಿ ತೆರವುಗೊಳಿಸಿ ಜಲ ಜೀವನ್ ಮಿಷನ್ ಯೋಜನೆಯಡಿ ನೀಡಲಾದ ಹೊಸ ನಲ್ಲಿ ಸಂಪರ್ಕಗಳ ಮೂಲಕ ನೀರನ್ನು ಪೂರೈಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಸೂಚಿಸಿದರು.