ಶ್ರವಣದೋಷ ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಯಶಸ್ವಿಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಬಿಎಲ್‌ಡಿಇ ಡಿಮ್ಡ್ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಕಿವಿ, ಮೂಗು ಹಾಗೂ ಗಂಟಲು ವಿಭಾಗದಲ್ಲಿ ಶ್ರವಣ ದೋಷದಿಂದ ಬಳಲುತ್ತಿದ್ದ ಎರಡು ವರ್ಷದೊಳಗಿನ ಇಬ್ಬರು ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಅತ್ಯಾಧುನಿಕ ಕಿವಿಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಡಿ ಆಸ್ಪತ್ರೆಯಲ್ಲಿ ಈವರೆಗೆ ಐದು ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ನಡೆಸಿದಂತಾಗಿದೆ.