ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದ 75 ಎಕರೆ ವಿಸ್ತೀರ್ಣದಲ್ಲಿ ಬರೋಬ್ಬರಿ 2,350 ಕೋಟಿ ರು. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾಂಗಣ ಸಂಕೀರ್ಣ ನಿರ್ಮಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಲಾಗಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅ.17ರಿಂದ ಹೆಚ್ಚಲಿರುವ ಪ್ರಯಾಣಿಕರ ಒತ್ತಡ ನಿವಾರಣೆಗಾಗಿ ಕೆಎಸ್ಸಾರ್ಟಿಸಿ ಜತೆಗೆ ಬಿಎಂಟಿಸಿಯಿಂದ 960 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗುತ್ತಿದೆ.
ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವ್ಯರ್ಥ ಆಗುತ್ತಿದೆ. ಸುಮಾರು 360 ಕೋಟಿ ಮೌಲ್ಯದ ಆಹಾರ ವ್ಯರ್ಥ ಮಾಡಲಾಗುತ್ತಿದೆ. ಗೊತ್ತಿದ್ದು ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರುವ ಅಹಂಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾಗಿರುವ ಮತಕಳ್ಳತನ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ಕಲಬುರಗಿಯಲ್ಲಿ ತಲಾಶ್ ಮುಂದುವರಿಸಿದೆ. ಪ್ರಮುಖ 5 ಸ್ಥಳಗಳಲ್ಲಿ ನಡೆದ ತಪಾಸಣೆಯಲ್ಲಿ ಸಾವಿರಾರು ಮತದಾರರ ಗುರುತಿನ ಚೀಟಿಗಳು ಪತ್ತೆ
ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ರೈತರಿಗೆ ಸೂಕ್ತ ಬೆಳೆ ವಿಮೆ ಪರಿಹಾರ ನೀಡಲು ನಮ್ಮ ಸರ್ಕಾರ ಸಿದ್ದವಿದೆ. ಆದರೆ, ವಿರೋಧ ಪಕ್ಷದ ಕೆವಲರು ನಾನು ನಿಮಗೆ ಪರಿಹಾರ ಕೊಡಿಸುತ್ತೇನೆ ಎಂದು ಹೇಳಿ ಮುಗ್ಧ ಜನರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ