ಕನ್ಹೇರಿ ಶ್ರೀ ಹೇಳಿಕೆಗೆ ಬಸವ ಭಕ್ತರ ಕಿಡಿಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಬಸವ ಸಂಸ್ಕೃತಿ ಅಭಿಯಾನ, ಲಿಂಗಾಯತ ಮಠಾಧೀಶರ ಒಕ್ಕೂಟದ ವಿರುದ್ಧ ಅಸಾಂವಿಧಾನಿಕ ಪದಗಳನ್ನು ಬಳಸಿ ನಿಂದಿಸಿರುವ ಕನ್ಹೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವರ್ತನೆ ಖಂಡಿಸಿ ಗುರುವಾರ ಪಟ್ಟಣದಲ್ಲಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಮಸಬಿನಾಳ ವಿರಕ್ತಮಠದ ಸಿದ್ದರಾಮ ಸ್ವಾಮೀಜಿ, ಯಲ್ಲಾಲಿಂಗಮಠದ ಬಸವರಾಜ ಮಹಾರಾಜರ ನೇತೃತ್ವದಲ್ಲಿ ವಿವಿಧ ಬಸವ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.