ಹಾಸನಾಂಬ ದೇವಿ ದರ್ಶನ ಪಡೆದ ಬುಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ ಅವರು ಅರ್ಚಕರು ನೀಡಿದ ಮಂಗಳಾರತಿ ಪಡೆದು ದೇವರ ಸನ್ನಿಧಿಯಿಂದ ಕೊಟ್ಟ ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟುಕೊಂಡರು.
ರಾಜ್ಯ ಸರ್ಕಾರದ ಜಾತಿ ಗಣತಿಗೆ ತೆರಳಿದ್ದ ಕೋಲಾರ ಜಿಲ್ಲೆಯ ಶಿಕ್ಷಕಿಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಗಣತಿಯಲ್ಲಿ ಹಿರಿಯ ಅಧಿಕಾರಿಗಳು ಕೊಟ್ಟ ಒತ್ತಡದಿಂದಾಗಿಯೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.
ದರ ಕುಸಿತವಾಗಿರುವುದನ್ನು ಖಂಡಿಸಿ ಬುಧವಾರ ರಸ್ತೆಗೆ ಈರುಳ್ಳಿ ಸುರಿದು ರೈತರು ಪ್ರತಿಭಟನೆ ನಡೆಸಿದರು. ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿ ಅಕ್ಕಪಕ್ಕದ ಹಲವು ಜಿಲ್ಲೆಗಳಿಂದ ಹುಬ್ಬಳ್ಳಿ ಎಪಿಎಂಸಿಗೆ ಈರುಳ್ಳಿ ಆವಕವಾಗಿತ್ತು.
ಪೊಲೀಸ್ ಮತ್ತು ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಸಿಗುವಂತೆ ಮಾಡಲು ಎಂಎಸ್‌ಐಎಲ್‌ನಿಂದ ಸೂಪರ್ ಮಾರ್ಕೆಟ್ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ಮುಂದಿನ ಶೈಕ್ಷಣಿಕ ಸಾಲಿನಿಂದ ಮತ್ತೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು ಯೋಜನೆ ರೂಪಿಸಲಾಗಿದ್ದು, ಇವುಗಳಲ್ಲಿ 500 ಶಾಲೆಗಳಿಗೆ ಬುಧವಾರ ಪಟ್ಟಿ ಸಹಿತ ಅಧಿಸೂಚನೆ ಹೊರಡಿಸಲಾಗಿದೆ.
ಬಿಜೆಪಿಯ ಎಷ್ಟು ಶಾಸಕರನ್ನು ಗಣ ವೇಷದಲ್ಲಿ ನೋಡಿದ್ದೀರಿ? । ಧರ್ಮ, ತ್ರಿಶೂಲ ದೀಕ್ಷೆ, ಜಾತಿ ಇವೆಲ್ಲ ಬೇರೆ ಮಕ್ಕಳಿಗೆ ಸಮಿತಿ । ಅದು ತಮ್ಮ ಮಕ್ಕಳಿಗೆ ಆರೆಸ್ಸೆಸ್ ಯಾಕೆ ನೀಡಲ್ಲ: ಪ್ರಿಯಾಂಕ್