ಮಳಖೇಡ ಗ್ರಂಥಪಾಲಕಿ ಸಾವು, ಪರಿಹಾರ ನೀಡಲು ಒತ್ತಾಯಕಳೆದ ಮೂರ್ನಾಲ್ಕು ತಿಂಗಳಿನಿಂದ ಸಂಬಳ ನೀಡದ ಕಾರಣಕ್ಕೆ ಬೇಸತ್ತು ಮಳಖೇಡದ ಗ್ರಂಥಪಾಲಕಿ ಭಾಗ್ಯವತಿ ಅಗ್ಗಿಮಠ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದನ್ನು ಖಂಡಿಸಿ ಗ್ರಂಥಾಲಯ ಮೇಲ್ವಿಚಾರಕರ ಸಂಘ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಕಾರಿಗಳು ಮಂಗಳವಾರ ಹಾವೇರಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, ಬಳಿಕ ಜಿಪಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.