26 ಗ್ರಾಪಂಗಳ ಗ್ರಾಮಸ್ಥರು ಇ-ಕೆವೈಸಿ ಮಾಡಿಸಿಕೊಳ್ಳಲು ಡಾ.ಆರ್.ದೇವೇಂದ್ರಪ್ಪ ಕರೆತರೀಕೆರೆಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯಡಿ ಕೆಲಸ ಮಾಡುತ್ತಿರುವ ತರೀಕೆರೆ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿನ ಜಾಬ್ ಕಾರ್ಡ್ ಕೂಲಿಕಾರರಿಗೆ ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ ಗೊಳಿಸಲಾಗಿದೆ. ತಾಲೂಕಿನ ಎಲ್ಲಾ 26 ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾಬ್ ಕಾರ್ಡ್ ಹೊಂದಿರುವ ಕೂಲಿಕಾರರು ಇ-ಕೆವೈಸಿ ಪ್ರಕ್ರಿಯೆ ಅ. 31, 2025ರ ಒಳಗೆ ಪೂರ್ಣಗೊಳಿಸಬೇಕು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ದೇವೇಂದ್ರಪ್ಪ ತಿಳಿಸಿದ್ದಾರೆ.