ಮಹಾಂತ ಶ್ರೀಗಳು ಬಯಸಿದ್ದು ವ್ಯಸನಮುಕ್ತ ಸಮಾಜಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರ ದುಶ್ಚಟಗಳನ್ನು ತಮ್ಮ ಜೋಳಿಗೆಯಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು ಎಂದು ಅಥಣಿ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಹೇಳಿದರು.