ಹುಡಾ ಅಧ್ಯಕ್ಷ ಪಟೇಲ್ ಶಿವಣ್ಣಗೆ ಶಾಸಕ ಶಿವಲಿಂಗೇಗೌಡ ಅಭಿನಂದನೆಹುಡಾ ಅಧ್ಯಕ್ಷರಾಗಿ ಪಟೇಲ್ ಶಿವಪ್ಪ (ಗೊಲ್ಲರಹಳ್ಳಿ) ಆಯ್ಕೆಯಾಗಿರುವುದು ಸಂತಸದ ಸಂಗತಿಯಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ಗೃಹ ಕಚೇರಿಯಲ್ಲಿ ಪಟೇಲ್ ಶಿವಣ್ಣ ಅವರನ್ನು ಭೇಟಿ ಮಾಡಿ ಅಭಿನಂದಿಸಿದ ಶಾಸಕರು, “ನೀವು ಈ ಹುದ್ದೆಯಲ್ಲಿ ಹೆಚ್ಚು ಸೇವೆ ಸಲ್ಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಕೀರ್ತಿ ತರಬೇಕು. ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳ ಜಾರಿಗೆ ಬದ್ಧವಾಗಿದೆ, ಅದನ್ನು ಕಾರ್ಯರೂಪಕ್ಕೆ ತರಲು ಹುಡಾ ಮುಖ್ಯ ಪಾತ್ರವಹಿಸಲಿ” ಎಂದು ಹೇಳಿದರು.