ಕಾಳಜಿ ಕೇಂದ್ರಕ್ಕೆ ಶಾಸಕ ಮಂತರ್ ಗೌಡ ಭೇಟಿಮಡಿಕೇರಿ ನಗರದ ರೆಡ್‌ಕ್ರಾಸ್ ಭವನದ ಕಾಳಜಿ ಕೇಂದ್ರಕ್ಕೆ ಶಾಸಕ ಡಾ.ಮಂತರ್ ಗೌಡ ಶುಕ್ರವಾರ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದರು. ತಡೆಗೋಡೆ ಬಿರುಕು ಬಿಟ್ಟಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾದಲ್ಲಿ ತೊಂದರೆಗೆ ಸಿಲುಕಬೇಕಾಗುತ್ತದೆ. ಆದ್ದರಿಂದ ತಾತ್ಕಾಲಿಕವಾಗಿ ಕಾಳಜಿ ಕೇಂದ್ರದಲ್ಲಿ ಇರುವಂತೆ ಮನವಿ ಮಾಡಿದರು.