ಸಹಕಾರ ಸಂಘಗಳಲ್ಲಿ ಅಧ್ಯಕ್ಷ ಸ್ಥಾನಕ್ಕಷ್ಟೇ ಮೀಸಲುರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024 ಹಾಗೂ ಸೌಹಾರ್ದ ಸಂಘಗಳ ತಿದ್ದುಪಡಿ ವಿಧೇಯಕಗಳಿಗೆ ರಾಜ್ಯಪಾಲರ ಸಲಹೆ ಮೇರೆಗೆ ಕೆಲ ಬದಲಾವಣೆ ಮಾಡಲು ಸಚಿವ ಸಂಪುಟ ನಿರ್ಧರಿಸಿದ್ದು, ಒಟ್ಟು ಹದಿನೇಳು ವಿಧೇಯಕಗಳನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ.