ವಿದ್ಯಾರ್ಥಿಗಳಿಗೆ ಉಚಿತ ವಚನ ಪುಸ್ತಕಗಳ ವಿತರಣೆ12ನೇ ಶತಮಾನದ ಬಸವಾದಿ ಶಿವ ಶರಣರ ವಚನವಾದ "ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇತರರ ಹಳಿಯಲು ಬೇಡ ಇದೇ ಅಂತರಂಗ ಶುದ್ದಿ, ಇದೇ ಬಹಿರಂಗ ಶುದ್ಧಿ ಇದೇ ನಮ್ಮ ಕೂಡಲಸಂಗಮದೇವನೊಲಿಸುವ ಪರಿ ". ಈ ವಚನವನ್ನು ಪಾಲಿಸಿದರೇ ಸಾಕು ನಮ್ಮ ಜನ್ಮ ಸಾರ್ಥಕವಾಗುತ್ತದೆ ಎಂದು ಅರಕಲಗೂಡು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ್ ಅವರು ವಿದ್ಯಾರ್ಥಿಗಳಿಗೆ ವಚನ ಪಠಣ ಮಾಡಿದರು.