• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಟ್ಟಿದ ಒಂದೇ ದಿನಕ್ಕೆ ಮಗುವನ್ನು ಸಾಂತ್ವನ ಕೇಂದ್ರಕ್ಕೆ ನೀಡಿದ ದಂಪತಿ..!
ಹುಟ್ಟಿದ ಒಂದೇ ದಿನಕ್ಕೆ ಆರೈಕೆ ಮಾಡಲು ಶಕ್ತಿ ಇಲ್ಲ ಎಂಬ ಕಾರಣ ನೀಡಿ ದಂಪತಿ ಮಗುವನ್ನು ಸಾಂತ್ವನ ಕೇಂದ್ರಕ್ಕೆ ನೀಡಿದ ಅಪರೂಪದ ಘಟನೆ ಪಟ್ಟಣದಲ್ಲಿ ಗುರುವಾರ ನಡೆದಿದೆ. ಮಗುವಿನ ತಂದೆ-ತಾಯಿ ನಮಗೆ ಮಗುವಿನ ಆರೈಕೆ ಮಾಡಲು ಶಕ್ತಿ ಇಲ್ಲ. ನಮಗೆ ಈಗಾಗಲೇ ನಾಲ್ಕೂವರೆ ವರ್ಷದ ಗಂಡು ಮಗುವಿದೆ. ಹೀಗಾಗಿ ಈ ಮಗುವನ್ನು ಬೇರೆಯವರಿಗೆ ದತ್ತು ನೀಡುವುದಾಗಿ ವೈದ್ಯರಿಗೆ ತಿಳಿಸಿದ್ದರು.
ವರಮಹಾಲಕ್ಷ್ಮಿ ಪೂಜೆಗೆ ನಾಗಮಂಗಲ ತಾಲೂಕಿನಾದ್ಯಂತ ಸಿದ್ಧತೆ
ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ನಾಗಮಂಗಲ ಪಟ್ಟಣದ ಹೃದಯ ಭಾಗದಲ್ಲಿ ಪೂಜೆಗೆ ಬೇಕಾದ ಸಾಮಗ್ರಿ ಖರೀದಿ ಭರಾಟೆ ಜೋರಾಗಿತ್ತು. ಪಟ್ಟಣದ ತಾಲೂಕು ಆಡಳಿತ ಸೌಧದ ಮುಂಭಾಗದ ರಸ್ತೆ ಎರಡೂಬದಿಯಲ್ಲಿ ವಿವಿಧ ಬಗೆಯ ಹಣ್ಣುಗಳು, ಹೂವು, ಬಾಳೆ ಕಂದು, ಮಾವಿನಸೊಪ್ಪು ಮತ್ತು ವಿಶೇಷವಾಗಿ ತಾವರೆ ಹೂವುಗಳನ್ನು ರಾಶಿ ಹಾಕಿಕೊಂಡು ವರ್ತಕರು ವ್ಯಾಪಾರ ನಡೆಸಿದರು.
ಬೆಂಗಳೂರು- ಜಲಸೂರು ರಾಜ್ಯ ಹೆದ್ದಾರಿ ನ್ಯೂನತೆ ಸರಿಪಡಿಸಿ: ಶಾಸಕ ಎಚ್.ಟಿ.ಮಂಜು ಆಗ್ರಹ
ನಾಗಮಂಗಲ ತಾಲೂಕಿನ ಮೂಲಕ ತಾಲೂಕಿನ ಗಿಡದ ಬೊಪ್ಪನಹಳ್ಳಿ ಗಡಿಯಿಂದ ಜಲಸೂರು ಹೆದ್ದಾರಿ ತಾಲೂಕಿಗೆ ಪ್ರವೇಶಿಸುತ್ತದೆ. ಗಿಡ ಬೊಪ್ಪನಹಳ್ಳಿಯ ಬಳಿ ರಸ್ತೆ ಎರಡು ಕವಲಾಗಿದ್ದು, ವಾಹನ ಸವಾರರ ಹಿತದೃಷ್ಟಿಯಿಂದ ಇಲ್ಲೊಂದು ವೃತ್ತ ನಿರ್ಮಿಸಿಲ್ಲ. ಇದರಿಂದ ಇದು ಅಪಘಾತದ ಸ್ಥಳವಾಗಿ ಮಾರ್ಪಟ್ಟಿದೆ.
ಪ್ರೀತಿ, ಭಕ್ತಿ ಇದ್ದರೆ ಮಾತ್ರ ಭಗವಂತನನ್ನು ಕಾಣಲು ಸಾಧ್ಯ: ತ್ರಿನೇತ್ರ ಸ್ವಾಮೀಜಿ
ಮನುಷ್ಯರಾದ ನಾವುಗಳು ಹಣ, ಅಧಿಕಾರದ ಹಿಂದೆ ಓಡುತ್ತಿದ್ದೇವೆ. ಹಣ ಸಂಪಾದನೆಯ ಜತೆಗೆ ಸಾಧ್ಯವಾದಷ್ಟು ಪುಣ್ಯದ ಕೆಲಸ ಮಾಡಬೇಕು. ಸಮಾಜದಲ್ಲಿ ಒಂದೊಂದು ಅಡಿ ಜಾಗಕ್ಕೂ ಪರಸ್ಪರ ಹೊಡೆದಾಡಿಕೊಂಡು ಕೋರ್ಟ್ ಕಚೇರಿ ಅಲೆದಾಡುತ್ತಿದ್ದಾರೆ. ಅಂತಹ ದಿನಗಳಲ್ಲಿ ಅಲ್ಪಳ್ಳಿ ವೆಂಕಟೇಶಪ್ಪ ಎಂಬುವವರು ದೇವಸ್ಥಾನ ನಿರ್ಮಾಣಕ್ಕೆ ಎರಡು ಎಕರೆ ಭೂಮಿ ದಾನವಾಗಿ ನೀಡಿದ್ದಾರೆ.
ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಶಿಸ್ತು ಕ್ರಮ: ತಹಸೀಲ್ದಾರ್
ಕೃಷಿ ಭೂಮಿಗೆ ಅಗತ್ಯಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಯೂರಿಯಾ ಮತ್ತು ರಾಸಾಯನಿಕ ಯುಕ್ತ ರಸಗೊಬ್ಬರ ಬಳಕೆ ಮಾಡುವುದರಿಂದ ಆಗಬಹುದಾದ ದುಷ್ಪರಿಣಾಮ ಕುರಿತು ರೈತರಿಗೆ ಅರಿವು ಮೂಡಿಸಬೇಕು. ಹಸಿರೆಲೆ, ಕೊಟ್ಟಿಗೆ ಗೊಬ್ಬರ ಮತ್ತು ಸಾವಯವ ಗೊಬ್ಬರ ಬಳಸುವುದರಿಂದ ಭೂಮಿ ಫಲವತ್ತತೆ ಹೆಚ್ಚಿಸಬಹುದಾಗಿದೆ.
ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಳ, ಅಭಿವೃದ್ಧಿ ಕುಂಠಿತ: ಛಲವಾದಿ ನಾರಾಯಣಸ್ವಾಮಿ
ಕಾಂಗ್ರೆಸ್ ಶಾಸಕ ಬಸವರಾಜು ರಾಯರೆಡ್ಡಿ ಹಾಗೂ ರಾಜು ಕಾಗೆ ಅವರು ಭ್ರಷ್ಟಾಚಾರದಲ್ಲಿ ದೇಶದಲ್ಲೇ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಆರೋಪಿಸುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಆಡಳಿತದ ವೈಫಲ್ಯ ಮುಚ್ಚಿಕೊಳ್ಳಲು ಜಾತಿ ಸಮೀಕ್ಷೆ, ಒಳ ಮೀಸಲಾತಿ ವಿಚಾರವನ್ನು ಮುನ್ನೆಲೆಗೆ ತಂದು ಜನರ ಗಮನ ಬೇರೆಡೆಗೆ ಸೆಳೆಯುವ ತಂತ್ರ ಮಾಡುತ್ತಿದ್ದಾರೆ.
ಕಾಂಗ್ರೆಸ್ ತತ್ವ ಸಿದ್ಧಾಂತ ವಿರುದ್ಧ ನಡೆದುಕೊಂಡವರ ಮೇಲೆ ಕ್ರಮ
ಕಾಂಗ್ರೆಸ್ ಪಕ್ಷದ ಗಮನಕ್ಕೆ ಬಾರದೆ ಪಕ್ಷದ ತತ್ವ ಸಿದ್ಧಾಂತಕ್ಕೆ ವಿರುದ್ಧವಾಗಿ ನಾವೆಲ್ಲರೂ ಕಾಂಗ್ರೆಸ್ಸಿನವರೇ ಎಂಬಂತೆ ಬಿಂಬಿಸುವ ರೂಪದ ಮೆರವಣಿಗೆ ಮಾಡಲಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡಲಾಗಿದೆ. ಹುಡಾ ಅಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕು ಎಂಬುದನ್ನು ಸಿಎಂ ತೀರ್ಮಾನ ಮಾಡಲಿದ್ದು, ಅದಕ್ಕೆ ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಸದಸ್ಯ ಸಲೀಂ ಅಬ್ದುಲ್ ತಿಳಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರಿಗೆ ನಾವೆಲ್ಲ ಅಧಿಕಾರ ನೀಡಿದ್ದು, ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಈ ಸಂದರ್ಭದಲ್ಲಿ ತಿಳಿಸಲು ಇಚ್ಚಿಸುತ್ತೇವೆ ಎಂದು ಹೇಳಿದರು.
ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಆರಂಭಿಸಿ
ನಗರದಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶೀಘ್ರ ಕಾರ್ಯಾರಂಭ ಮತ್ತು ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಸಬಲೀಕರಣಕ್ಕೆ ಒತ್ತಾಯಿಸಿ ಮಹಿಳಾ ಪರ ಸಂಘಟನೆಗಳು ಮತ್ತು ಕಾರ್ಯಕರ್ತೆಯರ ನಿಯೋಗದಿಂದ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದಿಂದ ಗುರುವಾರ ಜಿಲ್ಲಾಧಿಕಾರಿ ಲತಾ ಕುಮಾರಿಗೆ ಮನವಿ ಸಲ್ಲಿಸಲಾಯಿತು. ಮಾರಣಾಂತಿಕ ಕಾಯಿಲೆಗಳ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯಬೇಕು ಎಂದರು. ಯಾವುದೇ ಹಾನಿಕಾರಕ ರಾಸಾಯನಿಕ, ಕೃತಕ ಹಾಗೂ ಕಲುಷಿತ ಎಣ್ಣೆ ಮತ್ತು ಕೃತಕ ಬಣ್ಣಗಳು ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ವರಮಹಾಲಕ್ಷ್ಮೀ ಹಬ್ಬಕ್ಕೆ ಸೇವಂತಿಗೆ ಹೂ ಖರೀದಿ
ಪ್ರತಿ ವರ್ಷದಂತೆ ಈ ವರ್ಷವು ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಶ್ರದ್ಧೆ ಭಕ್ತಯಿಂದ ಜನತೆ ಆಚರಿಸುತ್ತಿದ್ದು, ಹಬ್ಬದ ವ್ಯಾಪಾರಕ್ಕಾಗಿ ಒಂದು ದಿವಸದ ಮೊದಲೆ ಗುರುವಾರದಂದು ನಗರದ ಮುಖ್ಯ ಮಾರುಕಟ್ಟೆಯಲ್ಲಿ ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ವ್ಯಾಪಾರ ಮಾಡಲು ಮುಗಿ ಬಿದ್ದಿದ್ದರು.ನಗರದ ಮಹಾವೀರ ವೃತ್ತ, ಕಸ್ತೂರಬಾ ರಸ್ತೆ, ಕಟ್ಟಿನಕೆರೆ ಮಾರುಕಟ್ಟೆ, ಬಿ.ಎಂ. ರಸ್ತೆ, ಸಾಲಗಾಮೆ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ವ್ಯಾಪಾರ ಜೋರಾಗಿಯೇ ನಡೆಯಿತು. ಪ್ರಮುಖವಾಗಿ ಸೇವಂತಿಗೆ ಒಂದು ಮಾರಿಗೆ ೧೦೦ರಿಂದ ೧೫೦ ರೂಗಳಿದ್ದು, ಪುಟ್ಟಬಾಳೆ ಒಂದು ಕೆಜಿಗೆ ೧೨೦ರಿಂದ ೧೫೦ ರು. ಗಳು, ತಾವರೆ ಎರಡಕ್ಕೆ ೧೦೦ರಿಂದ ೧೨೦, ಸೇಬು ಒಂದು ಕೆಜಿಗೆ ೧೦೦ರಿಂದ ೨೦೦ ಇತ್ತು.
ಚಿನ್ನಾಭರಣ ಖರೀದಿ ನಂತರ ಮಗುವನ್ನೆ ಮರೆತ ತಾಯಿ
ಚಿನ್ನಾಭರಣ ಖರೀದಿಗೆಂದು ಬಂದಿದ್ದ ಮಹಿಳೆ ಓರ್ವಳು ನಂತರದಲ್ಲಿ ತನ್ನ ಮಗುವನ್ನೆ ಮರೆತು ಮನೆಗೆ ಹೋದ ಘಟನೆ ನಗರದ ಗಾಂಧಿ ಬಜಾರ್‌ನಲ್ಲಿರುವ ಚಿನ್ನಾಭರಣ ಅಂಗಡಿಯೊಂದರಲ್ಲಿ ನಡೆದಿದೆ. ಪೊಲೀಸರು ಮಗುವಿಗಾಗಿ ಹುಡುಕಾಟ ನಡೆಸಿದ್ದರು. ಕೆಲ ಸಮಯದಲ್ಲಿಯೇ ಮಗುವನ್ನು ಕರೆದೊಯ್ದು ಊಟ ತಿನ್ನಿಸಿ ನಂತರ ಪೊಲೀಸರಿಗೆ ಒಪ್ಪಿಸಲು ಭವಾನಿ ಬಂದಳು. ಪೊಲೀಸರ ಸಮ್ಮುಖದಲ್ಲಿ ಭವಾನಿ ಮಗುವನ್ನು ತಾಯಿಗೆ ಹಸ್ತಾಂತರಿಸಲಾಯಿತು. ಒಟ್ಟಾರೆ ಮಗು ಕಾಣೆಯಾದ ಪ್ರಕರಣ ಸುಖಾಂತ್ಯಗೊಂಡಿತು. ಮಗುವನ್ನು ಭವಾನಿ ಕರೆದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ವೈರಲ್ ಆಗಿದೆ.
  • < previous
  • 1
  • ...
  • 498
  • 499
  • 500
  • 501
  • 502
  • 503
  • 504
  • 505
  • 506
  • ...
  • 13344
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved