ಸಿಲ್ವರ್ ಜ್ಯೂಬಿಲಿ ಪಾರ್ಕಲ್ಲಿ ಫಲಪುಷ್ಪ ಪ್ರದರ್ಶನಫಲಪುಷ್ಪ ಪ್ರದರ್ಶನದಲ್ಲಿ ಒಟ್ಟು ೮೦೦೦ ಸಂಖ್ಯೆಯ ವಿವಿಧ ಬಗೆಯ ಹೂವಿನ ಗಿಡಗಳನ್ನು ಉದ್ಯಾನವನದ ಪಾತಿಗಳಲ್ಲಿ ಮತ್ತು ವಿವಿಧ ಅಳತೆಯ ಪಾಟುಗಳಲ್ಲಿ ಬೆಳೆಸಲಾಗಿದ್ದು, ಮರಗಳ ಸುತ್ತ ಹಾಗೂ ಸಮೂಹಗಳಲ್ಲಿ ಆಕರ್ಷಕವಾಗಿ ಜೋಡಿಸುವ ಕಾರ್ಯ ಚಾಲ್ತಿಯಲ್ಲಿದೆ ಎಂದು ತಿಳಿಸಿದರು. ಈ ಬಾರಿಯ ಫಲಪುಷ್ಪ ಪ್ರದರ್ಶನದ ವಿಶೇಷವಾಗಿ ಶ್ರೀ ಹಾಸನಾಂಬೆ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ರಾಜಗೋಪುರ, ಗರುಡಗಂಬ ಮತ್ತು ದೀಪವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಲಾಗುತ್ತಿದೆ ಎಂದರು. ತೆಂಗು ಬೆಳೆಯಲ್ಲಿ ರೋಗ/ಕೀಟ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರಾತ್ಯಕ್ಷತೆಯನ್ನು ಏರ್ಪಡಿಸಿದ್ದು, ತಾಂತ್ರಿಕ ಮಾಹಿತಿ ಪಡೆಯಬಹುದಾಗಿದೆ ಎಂದರು.