ಸಹಕಾರಿ ಕ್ಷೇತ್ರ ದೇಶದ ಅಭಿವೃದ್ಧಿಯ ಹೆಬ್ಬಾಗಿಲು: ಎಸ್.ಆರ್. ಪಾಟೀಲರಾಷ್ಟ್ರೀಯ ಬ್ಯಾಂಕುಗಳು ಸುಲಭವಾಗಿ ಸಾಲ ಸೌಲಭ್ಯ ನೀಡುವುದಿಲ್ಲ. ಇಂಥ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದ ಆರ್ಥಿಕ ಸಂಸ್ಥೆಗಳು ಇಲ್ಲದಿದ್ದರೆ ರೈತರು ಲೇವಾದೇವಿಗಾರರ ಬಳಿ ಶೇ.3, 4, 5 ಮತ್ತು ಅದಕ್ಕಿಂತ ಹೆಚ್ಚಿನ ಬಡ್ಡಿಗೆ ಸಾಲ ಮಾಡಿ, ಮರಳಿಸಲಾಗದೇ ಹೊಲಮನೆ ಮಾರುವ ಪರಿಸ್ಥಿತಿ ಇರುತ್ತಿತ್ತು. ಸಹಕಾರಿ ಕ್ಷೇತ್ರ ದೇಶದ ಅಭಿವೃದ್ಧಿಯ ಹೆಬ್ಬಾಗಿಲು ಎಂದು ಎಸ್.ಆರ್. ಪಾಟೀಲ ಸಮೂಹ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರು ಹಾಗೂ ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.