ಗೊಬ್ಬರ ಕೊರತೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆಸಮರ್ಪಕ ರಸಗೊಬ್ಬರ ಪೂರೈಕೆ ಮಾಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ಭಾನುವಾರ ಶಿರಹಟ್ಟಿಯಲ್ಲಿ ಬಿಜೆಪಿ ಹಾಗೂ ರೈತ ಮೋರ್ಚಾ ವತಿಯಿಂದ ಮಾರುತಿ ದೇವಸ್ಥಾನದಿಂದ ಎತ್ತು, ಚಕ್ಕಡಿಯೊಂದಿಗೆ ಶಾಸಕ ಡಾ. ಚಂದ್ರು ಕೆ. ಲಮಾಣಿ ನೇತೃತ್ವದಲ್ಲಿ ಮೆರವಣಿಗೆ ನಡೆಸಿ, ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸರ್ಕಾರದ ಕಾರ್ಯವೈಖರಿ ವಿರುದ್ಧ ಹರಿಹಾಯ್ದರು.