ಅಂಬಿಗರ ಚೌಡಯ್ಯ ಮೂರ್ತಿ ಭಗ್ನ; ಶಿವಶರಣರಿಗೆ ಅಪಮಾನವೀರಗಣಾಚಾರಿ, ನಿಜಶರಣ ಅಂಬಿಗರ ಚೌಡಯ್ಯ ಅವರ ವಚನತತ್ವ ಸಿದ್ಧಾಂತದ ವಿರೋಧಿಗಳು ಮೂರ್ತಿ ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾರೆ. ಇದು ಬಸವಾದಿ ಶಿವಶರಣರಿಗೆ, ವಚನಕಾರರಿಗೆ ಮಾಡಿರುವ ಅಪಮಾನವಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.